
ಕೊಡಗು, ಆ.2: ಕೊಡಗಿನ ಆನೆಕಾಡು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಪೆರುವಾಜೆಯ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ.
ಭಾರೀ ರಭಸಕ್ಕೆ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಪಘಾತದ ನಂತರ ಕಾರು ಚರಂಡಿಯ ಮೂಲಕ ಕಾಡಿನೊಳಕ್ಕೆ ಹೋಗಿ ನಿಂತಿರುವುದು ತಿಳಿದು ಬಂದಿದೆ.
ಘಟನೆಯ ಕುರಿತು ಸ್ಥಳೀಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.






