ಕೆಯ್ಯೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ, ಪುತ್ತೂರು ಹಾಗೂ ವಕೀಲರ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಪಂಚಾಯತ್ ಪುತ್ತೂರು, ಕರ್ನಾಟಕ ಪತ್ರಕರ್ತರ ಸಂಘ, ಪುತ್ತೂರು, ಅನಿಕೇತನ ಎಜುಕೇಶನಲ್ ಟ್ರಸ್ಟ್ ಹಾಗೂ ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ) ಇವರ ಸಹಭಾಗಿತ್ವದಲ್ಲಿ ಮಾನವ ಕಳ್ಳಸಾಗಾಣಿಕೆ ತಡೆ ದಿನಾಚರಣೆ ಅಂಗವಾಗಿ  ಕಾನೂನು ಮಾಹಿತಿ ಕಾರ್ಯಾಗಾರ ಅ4ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಕೆಯ್ಯೂರಿನಲ್ಲಿ,  ಕೆಯ್ಯೂರು  ಗ್ರಾಮ ಪಂಚಾಯತ್ ಅಧ್ಯಕ್ಷ  ಶರತ್ ಕುಮಾರ್ ಮಾಡಾವು ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪುತ್ತೂರು ವಕೀಲರಾದ ಪ್ರಿಯಾ ಪಿ.ವಿ .  ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ  ಬೆಳ್ಳಾರೆ ಶಾಖಾ ವ್ಯವಸ್ಥಾಪಕರು ಜೀವಿತ ಕೆ, ಕೆಯ್ಯೂರು  ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ  ನಮಿತಾ ಎ.ಕೆ,ಕೆಪಿಎಸ್ ಕೆಯ್ಯೂರು ಪ್ರಾಂಶುಪಾಲೆ ಹಸೀನಾ ಬಾನು  ಎಸ್.ಇ ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕ ಪ್ರಧಾನ ಕಾರ್ಯದರ್ಶಿ ಆದಿತ್ಯ ಈಶ್ವರಮಂಗಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕೆಪಿಎಸ್ ಕೆಯ್ಯೂರು ಉಪಪ್ರಾಂಶುಪಾಲ ವಿನೋದ್ ಕುಮಾರ್ ಕೆಎಸ್ ಸ್ವಾಗತಿಸಿ, ಸರಕಾರಿ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿ ಕೆಯ್ಯೂರು ವಿದ್ಯಾರ್ಥಿ ನಾಯಕ ಮಹಮ್ಮದ್  ಮಿಕ್ ರಾಜ್ ಕೆ.ಇ ವಂದಿಸಿ, ಕೆಪಿಎಸ್ ಕೆಯ್ಯೂರು ವಿದ್ಯಾರ್ಥಿ  ಅಸ್ಮಿತಾ ಎಸ್ ಕಾರ್ಯಕ್ರಮ ನಿರಪಿಸಿದರು. ಈ ಸಂದರ್ಭದಲ್ಲಿ  ಕೆಪಿಎಸ್‌ ಕೆಯ್ಯೂರು  ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷ ಎ.ಕೆ ಜಯರಾಮ ರೈ ಕೆಯ್ಯೂರು, ಕೆಪಿಎಸ್ ಕೆಯ್ಯೂರು ಪ್ರಾಥಮಿಕ ವಿಭಾಗ ಪದವೀಧರ ಮುಖ್ಯಗುರು ಬಾಬು ಎಂ,  ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಚಾರ್ ಟೇಬಲ್ ಟ್ರಸ್ಟ್ ಕಾರ್ಯಕ್ರಮ ಸಂಯೋಜಕ ಬಿಪಿನ್ ಚಂದ್ರ,   ಶ್ರೀ  ದುರ್ಗಾಂಬಿಕಾ ಸಂಜೀವಿನಿ ತಂಡ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು, ಶಿಕ್ಷಕವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!