
ಕಡಬ, ಆ.7 – ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕಚ್ಚಾ ಮಣ್ಣಿನ ರಸ್ತೆಯಲ್ಲಿ ಸಂಭವಿಸಿದ ದುರಂತದಲ್ಲಿ ಧರ್ಮಪಾಲ (68) ಎಂಬ ಹಿರಿಯ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಪೊಲೀಸ್ ಮಾಹಿತಿಯ ಪ್ರಕಾರ, ಮೃತರ ಮಗ ಏರು ರಸ್ತೆಯಲ್ಲಿ ಜೀಪು ಚಲಾಯಿಸುತ್ತಿದ್ದ ವೇಳೆ, ವಾಹನ ಮೇಲಕ್ಕೆ ಏರದ ಕಾರಣ ಧರ್ಮಪಾಲರು ಕೆಳಗೆ ಇಳಿದು ಹಿಂಬದಿ ನಿಂತಿದ್ದರು. ಈ ವೇಳೆ ಜೀಪು ಏಕಾಏಕಿ ಹಿಮ್ಮುಖವಾಗಿ ಚಲಿಸಿ ನಿಯಂತ್ರಣ ತಪ್ಪಿ ಅವರ ಮೇಲೆ ಮಗುಚಿ ಬಿದ್ದಿದೆ.
ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರ ನೆರವಿನಿಂದ ಕಡಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರು ಮೃತರಾಗಿರುವುದಾಗಿ ತಿಳಿಸಿದ್ದಾರೆ
ನಾಗೇಶ್ ಎಂಬವರ ದೂರಿನ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ. 54/2025, ಕಲಂ 281, 106 BNS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.






