
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಸಂತ ಗಿಳಿಯಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ಶೇಖರ ಲಾಯಿಲ ಎಂಬವರು ನೀಡಿದ ದೂರಿನ ಪ್ರಕಾರ, ವಸಂತ ಗಿಳಿಯಾರ್ ಫೇಸ್‌ಬುಕ್‌ನಲ್ಲಿ ಹಾಕಿದ ಸಂದೇಶವು ಧರ್ಮ ಹಾಗೂ ಸಮುದಾಯಗಳ ನಡುವೆ ವೈಮನಸ್ಸು ಉಂಟುಮಾಡುವ ಸ್ವರೂಪದ್ದಾಗಿದ್ದು, ಇದರಿಂದ ಸಾಮಾಜಿಕ ಸ್ವಾಸ್ಥ್ಯಕ್ಕೆ ಹಾನಿ ಸಂಭವಿಸಬಹುದೆಂದು ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ, ಬೆಳ್ತಂಗಡಿ ಠಾಣೆಯಲ್ಲಿ ಬಿಎನ್ಎಸ್‌ನ ಸೆಕ್ಷನ್ 196(1)(ಎ) ಹಾಗೂ 353(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.






