ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವಂತೆ ಸುದ್ದಿ ಪ್ರಸಾರ ಮಾಡಿದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.

ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನ “ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜನ್ನು ಹೊಂದಿರುವ ವ್ಯಕ್ತಿಯು, ಧರ್ಮಗಳ ನಡುವೆ ಹಾಗೂ ಸಮುದಾಯಗಳ ನಡುವೆ ವೈಮನಸ್ಸನ್ನು ಉಂಟಾಗುವಂತೆ, ಮತ್ತು ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತೆ, ಸುಳ್ಳು ಸುದ್ದಿ ಪ್ರಸಾರ ಮಾಡಿ ಸಾರ್ವಜನಿಕ ವಲಯದಲ್ಲಿ ಆತಂಕ ಮೂಡುವಂತೆ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ, ದಿನಾಂಕ :- 10.08.2025 ರಂದು ಸುಮೋಟೋ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!