ಕಾಂಗ್ರೆಸ್‌ ಪಾಳಾಯದಲ್ಲಿ ರೋಚಕ ಬೆಳವಣಿಗೆ ನಡೆದಿದ್ದು, ಸಹಕಾರ ಸಚಿವ ಕೆ. ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೌದು ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವರಾದ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ..

ಸಿಎಂ ಸಿದ್ದರಾಮಯ್ಯ ಅವರ ಆತ್ಮೀಯ ಬಳಗದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ, ಸಹಕಾರಿ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. 1972ರಿಂದ ಸಹಕಾರಿ ಕ್ಷೇತ್ರದಲ್ಲಿ ತೊಡಗಿಸಿಕೊಂಡ ಅವರು, ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟದ ನಿರ್ದೇಶಕರಾಗಿಯೂ,

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ 2ನೇ ವಿಕೆಟ್ ಪತನವಾದಂತೆ ಆಗಿದೆ. ಈ ಹಿಂದೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!