
ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ.ಮತಗಳ್ಳತನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್‌ಗೆ ಇರಿಸು-ಮುರಿಸು ಉಂಟು ಮಾಡಿದ್ದ ಕೆ.ಎನ್.ರಾಜಣ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು ಎಂಬ ಸುದ್ದಿಗಳು ಹರಿದಾಡಿದ್ದವು.
ಆದರೆ ಕೆಲ ರಾಜಕೀಯ ನಾಯಕರು ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲ, ತೆಗೆದುಹಾಕಲಾಗಿದೆ ಎಂಬ ಹೇಳಿಕೆಗಳನ್ನು ನೀಡಿದ್ದರು.
ಇದಾದ ಬೆನ್ನಲ್ಲೇ ಇದೀಗ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ರಾಜಣ್ಣ ಅವರನ್ನು ಕೂಡಲೇ ಸಚಿವ ಸಂಪುಟದಿಂದ ತೆಗೆದುಹಾಕುವಂತೆ ಆದೇಶಿಸಿ ಬರೆದ ಪತ್ರ ವೈರಲ್ ಆಗಿದೆ.
ಈ ಸಂಬಂಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್‌ರವರು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ರವರಿಗೆ ಅಧಿಸೂಚನೆಯನ್ನು ಇಂದು (ಆಗಸ್ಟ್ 11) ಕಳುಹಿಸಿದ್ದಾರೆ.






