ಪುತ್ತೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕುರಿತು ಮಂಗಳವಾರ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.

ಸಭೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಚಿವರಾದ ಕೃಷ್ಣ ಬೈರೇಗೌಡ, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳಕರ್, ಪ್ರಿಯಾಂಕ್ ಖರ್ಗೆ, ಎಸ್.ಎಸ್. ಮಲ್ಲಿಕಾರ್ಜುನ್, ಮಂಕಾಳ್ ವೈದ್ಯ, ಹಿರಿಯ ಶಾಸಕ ಆರ್.ವಿ. ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಮಂಜುನಾಥ್ ಭಂಡಾರಿ ಹಾಗೂ ಮೂರು ಜಿಲ್ಲೆಗಳ ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದರು.

ಕೆಂಪು ಕಲ್ಲು ಗಣಿಗಾರಿಕೆಗೆ ವಿಧಿಸಿದ ನಿರ್ಬಂಧದಿಂದ ಬಡ ಗಾರೆ ಕಾರ್ಮಿಕರಿಗೆ ತೊಂದರೆಯಾಗಿರುವ ವಿಚಾರವನ್ನು ಶಾಸಕ ಅಶೋಕ್ ರೈ ಸರಕಾರದ ಗಮನಕ್ಕೆ ತಂದಿದ್ದರು. ಸಮಸ್ಯೆಗೆ 15 ದಿನಗಳ ಒಳಗೆ ಪರಿಹಾರ ಕಂಡುಕೊಳ್ಳಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು..

Leave a Reply

Your email address will not be published. Required fields are marked *

Join WhatsApp Group
error: Content is protected !!