ಬೆಂಗಳೂರು: ನಿವೃತ್ತ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು 1,150 ಪುಟಗಳ ಚಾರ್ಜ್‌ಶೀಟ್‌ನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಓಂ ಪ್ರಕಾಶ್ ಪುತ್ರಿ ಕೃತಿಕಾ ಪಾತ್ರ ಕಂಡುಬಾರದ ಹಿನ್ನೆಲೆಯಲ್ಲಿ, ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಚಾರ್ಜ್‌ಶೀಟ್‌ನಲ್ಲಿ ಕೃತಿಕಾ ಹೆಸರು ಕೈಬಿಡಲಾಗಿದ್ದು, ಕೊಲೆ ನಡೆದ ವೇಳೆ ಅವರು ಮನೆಯ ಮೇಲ್ಮಹಡಿಯಲ್ಲಿ ಇದ್ದರೆಂದು ಸ್ಪಷ್ಟವಾಗಿದೆ. ಸೂಕ್ತ ಸಾಕ್ಷ್ಯಗಳ ಕೊರತೆಯಿಂದಾಗಿ, ಕೊಲೆಯಲ್ಲಿ ಅವರ ಪಾತ್ರವಿಲ್ಲವೆಂದು ಸಿಸಿಬಿ ತಿಳಿಸಿದೆ.

ಘಟನೆ ವಿವರ
ಏಪ್ರಿಲ್ 22ರಂದು ಹೆಚ್‌ಎಸ್‌ಆರ್ ಲೇಔಟ್‌ನ ಮನೆಯಲ್ಲಿ, ಪತ್ನಿ ಪಲ್ಲವಿಯೇ ಚಾಕುವಿನಿಂದ ಇರಿದು ಓಂ ಪ್ರಕಾಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ಥಳದಿಂದ ಚಾಕು ಮತ್ತು ಖಾರದಪುಡಿ ಡಬ್ಬಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ರಾಜ್ಯ ಸರ್ಕಾರದ ಆದೇಶದ ಮೇರೆಗೆ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿತ್ತು.

Leave a Reply

Your email address will not be published. Required fields are marked *

Join WhatsApp Group
error: Content is protected !!