ಗಂಡ ಹಾಗೂ ಮಕ್ಕಳನ್ನ ರೆಡಿ ಮಾಡಿ, ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣಕ್ಕೆ ಕಳಿಸಿದ ಬಳಿಕ ಪಿಎಸ್‌ಐ ಪತ್ನಿಯೊಬ್ಬರು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಮೋಕಾದಲ್ಲಿ (Moka) ನಡೆದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಮೋಕಾ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಕಾಳಿಂಗ ಅವರ ಪತ್ನಿ ಚೈತ್ರಾ (36) ಆತ್ಮಹತ್ಯೆ ಮಾಡಿಕೊಂಡಿದ್ದು, ತಮ್ಮ ಸಹೋದರ ಹಾಗೂ ಇಬ್ಬರು ಸಹೋದರಿಯರ ಸಾವಿನಿಂದ ಚೈತ್ರಾ ಮಾನಸಿಕ ಖಿನ್ನತೆ ಅನುಭವಿಸುತ್ತಿದ್ದರು ಎನ್ನಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಕಳೆದ 2 ತಿಂಗಳ ಹಿಂದೆ ಮೃತ ಚೈತ್ರಾ ಅವರ ಸಹೋದರ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಈ 2 ವರ್ಷಗಳಲ್ಲಿ ಅವರು ಸಹೋದರ ಹಾಗೂ ಇಬ್ಬರು ಸಹೋದರಿಯರನ್ನ ಕಳೆದುಕೊಂಡಿದ್ದರು. ಇದರಿಂದ ಮಾನಸಿಕವಾಗಿ ಬಹಳ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.

ಶಿವಮೊಗ್ಗದಲ್ಲಿ ಚಿಕಿತ್ಸೆ
ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದ ಕಾರಣದಿಂದ ಖಿನ್ನತೆಗೆ ಸಂಬಂಧಪಟ್ಟಂತೆ ಶಿವಮೊಗ್ಗದಲ್ಲಿ ಅವರಿಗೆ ಚಿಕಿತ್ಸೆ ಸಹ ಕೊಡಿಸಲಾಗಿತ್ತು. ಚಿಕಿತ್ಸೆ ಕೊಡಿಸಿದ ನಂತರ ನಿನ್ನೆ ಸಂಜೆಯಷ್ಟೇ ತವರು ಮನೆ ಮಲಪನಗುಡಿಯಿಂದ ಮೋಕಾಗೆ ಬಂದಿದ್ದರು. ಮನೆಗೆ ಬಂದ ನಂತರ ಎಲ್ಲವೂ ಸಾಮಾನ್ಯವಾಗಿತ್ತು. ಗಂಡ ಹಾಗೂ ಮಕ್ಕಳ ಜೊತೆ ಬಹಳ ಚೆನ್ನಾಗಿ ಇದ್ದರು. ಇಂದು ಬೆಳಗ್ಗೆ ಎಲ್ಲರನ್ನ ಮನೆಯಿಂದ ಕಳುಹಿಸಿ ನೇಣಿಗೆ ಶರಣಾಗಿದ್ದಾರೆ. ಚೈತ್ರಾ ಸಾವಿನಿಂದ ಪತಿ ಹಾಗೂ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!