
ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 12-08-2025ರಂದು ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಆರೋಪಿ ಹಾಗೂ ಕಳುವಾದ ಬಂಗಾರವನ್ನು ವಶಪಡಿಸಿಕೊಂಡಿದ್ದಾರೆ.
ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000 ನಗದು ಕಳವಾಗಿದ್ದ ಪ್ರಕರಣದಲ್ಲಿ, ನೆಟ್ಟಣಿಗೆ ಮುಡೂರು ಗ್ರಾಮದ ದಯಾನಂದ್ ನಾಯ್ಕ ಎಂ (29) ಎಂಬಾತನನ್ನು ಪುತ್ತೂರು ಈಶ್ವರಮಂಗಲದಲ್ಲಿ ಬಂಧಿಸಲಾಗಿದೆ. ಆರೋಪಿಯಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಬಳಸಿದ ಡಿಸ್ಕವರಿ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕಾರ್ಯಾಚರಣೆ ಪುತ್ತೂರು ಉಪವಿಭಾಗದ ಡಿವೈಎಸ್‌ಪಿ ಅರುಣ್ ನಾಗೇಗೌಡ ಹಾಗೂ ಪೊಲೀಸ್ ನಿರೀಕ್ಷಕ ರವಿ ಬಿ.ಎಸ್. ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಠಾಣಾ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ನೇತೃತ್ವದ ತಂಡ ನಡೆಸಿದೆ.






