ಕಳೆದ ಹತ್ತು ವರ್ಷದಲ್ಲಿ ಕೇಂದ್ರ ಸರ್ಕಾರದ (central Government) ಸಾಲ (Debt) ಬರೋಬ್ಬರಿ 130 ಲಕ್ಷ ಕೋಟಿ ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಾಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಉತ್ತರಿಸಿದ ಸೀತಾರಾಮನ್‌ ಲೋಕಸಭೆಯಲ್ಲಿ ನಡೆದ ಪ್ರಶ್ನೋತ್ತರ ಅವಧಿಯಲ್ಲಿ ಸಂಸದ ಡಾ. ಎಂ.ಕೆ ವಿಷ್ಣು ಪ್ರಸಾದ್‌ ಸೋಮವಾರ ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟ ಅವರು, 2015 ಹಾಗೂ 2016 ರಲ್ಲಿ ಕೇಂದ್ರದ ಸಾಲ 70.98 ಲಕ್ಷ ಕೋಟಿ ಇತ್ತು. ಆದರೆ ಈಗ ಅದರ ಸಾಲ ಹೆಚ್ಚಾಗಿದ್ದು, 2025-2026ರನೇ ವರ್ಷದಲ್ಲಿ ಬರೋಬ್ಬರಿ 200.16 ಲಕ್ಷ ಕೋಟಿ ಆಗಿದ್ದು ಕಳೆದ 10 ವರ್ಷದಲ್ಲಿ 130 ಲಕ್ಷ ಕೋಟಿ ಹೆಚ್ಚಾಗಿದೆ ಎನ್ನಲಾಗಿದೆ.

ಇನ್ನು ಕೇಂದ್ರ ಸರ್ಕಾರ ಈ ವರ್ಷ 4.61 ಲಕ್ಷ ಕೋಟಿ ಸಾಲವನ್ನ ಮರುಪಾವತಿ ಮಾಡಿದ್ದು, ಈ ಸಾಲಕ್ಕೆ ಸರ್ಕಾರ ಈ ವರ್ಷ 12.76 ಲಕ್ಷ ಬಡ್ಡಿ ಪಾವತಿ ಮಾಡುತ್ತಿದೆ.

ಕರ್ನಾಟಕದಲ್ಲಿ 5 ಪಟ್ಟು ಹೆಚ್ಚಾದ ತೆರಿಗೆ ವಂಚನೆ

2024-25ರಲ್ಲಿ ಕರ್ನಾಟಕದಲ್ಲಿ ಸರಕು ಮತ್ತು ಸೇವಾ ತೆರಿಗೆ ವಂಚನೆಯಲ್ಲಿ ಐದು ಪಟ್ಟು ಏರಿಕೆಯಾಗಿದೆ ಎಂದು ಕೇಂದ್ರ ಜಿಎಸ್‌ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ವಿಚಾರವಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಳೆದ ಸೋಮವಾರ ಲೋಕಸಭೆಯಲ್ಲಿ ಲಿಖಿತ ರೂಪದಲ್ಲಿ ಅಂಕಿಅಂಶಗಳನ್ನು ಹಂಚಿಕೊಂಡಿದ್ದು, ಮೂರು ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 39,577 ಕೋಟಿಗೆ ತಲುಪಿದೆ ಎಂದು ಹೇಳಿದ್ದರು. 2025ನೇ ಹಣಕಾಸು ವರ್ಷದಲ್ಲಿ ದಾಖಲಾಗಿದ್ದ 1,254 ಪ್ರಕರಣಗಳಲ್ಲಿ, ಸಿಜಿಎಸ್‌ಟಿ ಅಧಿಕಾರಿಗಳು ಒಂಬತ್ತು ಜನರನ್ನು ಬಂಧಿಸಿ, ಸ್ವಯಂಪ್ರೇರಿತ ತೆರಿಗೆ ಪಾವತಿಗಳ ಮೂಲಕ 1,623 ಕೋಟಿ ರೂ.ಗಳನ್ನು ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ದೇಶದ ಜಿಎಸ್‌ಟಿ ಸಂಗ್ರಹದಲ್ಲಿ ಹೆಚ್ಚಳ

ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ ಅಂದರೆ ಜಿಎಸ್‌ಟಿ ಸಂಗ್ರಹಣೆ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹ ದಾಖಲೆಯ ಮಟ್ಟ ತಲುಪಿದೆ ಎನ್ನಲಾಗಿದೆ. 2024-25ನೇ ಸಾಲಿನಲ್ಲಿ 22.08 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ ಎನ್ನುವುದನ್ನು ಸರ್ಕಾರದ ದತ್ತಾಂಶ ತಿಳಿಸಿದೆ.

ದೇಶದಲ್ಲಿ ಜಿಎಸ್‌ಟಿ ಜಾರಿಗೆ ಬಂದು 8 ವರ್ಷಗಳಾಗಿದ್ದು, ನೋಂದಾಯಿತ ತೆರಿಗೆ ಪಾವತಿದಾರರ ಸಂಖ್ಯೆ 65 ಲಕ್ಷದಿಂದ 1.51 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ 2024-25ರ ಆರ್ಥಿಕ ವರ್ಷದಲ್ಲಿ ದಾಖಲೆಯ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇಕಡಾ 9.4ರಷ್ಟು ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಜುಲೈ ವರೆಗೆ ಜಿಎಸ್‌ಟಿ ಗರಿಷ್ಠವಾಗಿ ಸಂಗ್ರಹವಾದ ವರ್ಷಗಳೆಂದರೆ 2020-2021ರ ಆರ್ಥಿಕ ವರ್ಷದಲ್ಲಿ 11.37 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇನ್ನು 2023-2024ರ ಆರ್ಥಿಕ ವರ್ಷದಲ್ಲಿ 1.68 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದ್ದರೆ, 2022ರ ಆರ್ಥಿಕ ವರ್ಷದಲ್ಲಿ 1.51 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿತ್ತು ಎಂದು ವರದಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!