
ಮಂಗಳೂರು: ಪ್ರಸಿದ್ಧ ಕ್ರೀಡಾ ಬ್ರಾಂಡ್‌ಗಳ ಹೆಸರಿನಲ್ಲಿ ನಕಲಿ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಮಂಗಳೂರು ನಗರ ಪೊಲೀಸರು ದಾಳಿ ನಡೆಸಿ, ನೂರಾರು ವಾಲಿಬಾಲ್, ಫುಟ್‌ಬಾಲ್ ಹಾಗೂ ಬ್ಯಾಡ್ಮಿಂಟನ್ ರಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
Brand Protectors India Pvt. Ltd. ನ ದಕ್ಷಿಣ ಭಾರತದ ಪ್ರಾದೇಶಿಕ ಮುಖ್ಯಸ್ಥ ಸ್ಟೀಫನ್ ರಾಜ್ ಅವರ ದೂರಿನ ಮೇರೆಗೆ ಉಳ್ಳಾಲ ಠಾಣಾ ವ್ಯಾಪ್ತಿಯ Sports Winner ಅಂಗಡಿ ಹಾಗೂ ಮಂಗಳೂರು ಉತ್ತರ ಠಾಣಾ ವ್ಯಾಪ್ತಿಯ ಮಹಾದೇವ್ Sports Centre ನಲ್ಲಿ COSCO, NIVIA ಮತ್ತು YONEX ಬ್ರಾಂಡ್ ಹೆಸರಿನಲ್ಲಿ ನಕಲಿ ಕ್ರೀಡಾ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು.
ಇದಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.140/2025, ಮಂಗಳೂರು ಉತ್ತರ ಠಾಣೆಯಲ್ಲಿ ಅ.ಕ್ರ.95/2025, ಕಲಂ 51(1)(b), 63, Copyright Act 1957 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಂತರ, ಆಗಸ್ಟ್ 18 ರಂದು ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಹಾಗೂ ಆಗಸ್ಟ್ 19 ರಂದು ಮಂಗಳೂರು ಉತ್ತರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿ, ಸುಮಾರು 300 ನಕಲಿ ವಾಲಿಬಾಲ್, ಫುಟ್‌ಬಾಲ್ ಮತ್ತು ಬ್ಯಾಡ್ಮಿಂಟನ್ ರಾಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದ್ದು, ನಕಲಿ ವಸ್ತುಗಳ ಸರಬರಾಜು ಜಾಲದ ಕುರಿತು ಸುಳಿವುಗಳನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.






