ಕಾರ್ಕಳ : ಬೈಲೂರಿನ ಹೊಟೇಲ್ ಉದ್ಯಮಿ ಕೃಷ್ಣರಾಜ ಹೆಗ್ಡೆ (45) ಅವರು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ.

ಅತ್ರಾಡಿಯ ತಮ್ಮ ನಿವಾಸದಲ್ಲಿ ವಿಷ ಸೇವಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಆಪ್ತರು ಅವರನ್ನು ತಮ್ಮಣ್ಣ ಎಂದು ಕರೆಸಿಕೊಳ್ಳುತ್ತಿದ್ದರು. ಮೃತರು ಪತ್ನಿ, ಪುತ್ರ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಕೃಷ್ಣರಾಜ ಹೆಗ್ಡೆ ಅವರು ಬೈಲೂರು–ಕೌಡೂರು ಮಾರಿಯಮ್ಮದೇವಸ್ಥಾನದ ನಾಯರ್‌ಬೆಟ್ಟು ಧಾರ್ಮಿಕ ಸೇವಾ ಸಮಿತಿಯ ಕಾರ್ಯದರ್ಶಿಯಾಗಿದ್ದು, ಉಡುಪಿ ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸಿಕೊಂಡಿದ್ದರು. ಅಲ್ಲದೇ ವಿವಿಧ ಧಾರ್ಮಿಕ ಹಾಗೂ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಅವರು ಸಕ್ರಿಯರಾಗಿದ್ದರು.

ಘಟನೆಯ ಕುರಿತು ಹಿರಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!