ಈ ಬಾರಿ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ಬಿಜೆಪಿ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಸಂಸದ, ರಾಜವಂಶಸ್ಥ ಯದುವೀರ್ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ನಿರ್ಧಾರವನ್ನು ಸ್ವಾಗತ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಬಾನು ಮುಷ್ತಾಕ್ ಖ್ಯಾತ ಬರಹಗಾರ್ತಿ. ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ. ಜೊತೆಗೆ ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.

ಮುಸ್ಲಿಂ ಮಹಿಳೆಯರಿಗೂ ಸಮಾನ ಹಕ್ಕು ಕೊಡಬೇಕು. ಮಸೀದಿಗಳಿಗೆ ಅವಕಾಶ ಕೊಡಬೇಕು ಎಂದು ಬಾನು ಮುಷ್ತಾಕ್ ಈ ಹಿಂದೆಯೇ ಸಾಮಾಜಿಕ ಬಹಿಷ್ಕಾರವನ್ನೂ ಎದುರಿಸಿದ್ದರು. ಕನ್ನಡ ಭಾಷೆ, ಕನ್ನಡ ಸಾಹಿತ್ಯಕ್ಕಾಗಿ ಅವರು ನೀಡಿರುವ ಕೊಡುಗೆ ಅಪಾರ. ಅವರನ್ನು ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವುದು ಸ್ವಾಗತಾರ್ಹ ಎಂದರು.

ಬಾನು ಮುಷ್ತಾಕ್ ಆಯ್ಕೆ ಬಗ್ಗೆ ಬಿಜೆಪಿ ನಾಯಕರಿಂದ ವಿರೋಧ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕಾರಿ ಕಾರ್ಯಕ್ರಮದಲ್ಲಿ ಪೂಜೆ ಮಾಡುವುದು ಇಲ್ಲವೇ ಇಲ್ಲ. ಇದು ಜಾತ್ಯಾತೀತ ವ್ಯವಸ್ಥೆಯಾಗಿದೆ. ಧಾರ್ಮಿಕ ಪೂಜೆಗಳನ್ನು ನಾವು ವೈಯಕ್ತಿಕವಾಗಿ ಮನೆಯಲ್ಲಿ ಮಾಡಿಕೊಳ್ಳುತ್ತೇವೆ. ಸರ್ಕಾರಕ್ಕೆ ಇದೊಂದು ಉತ್ಸವ. ಅವರ ಆಯ್ಕೆ ಬಗ್ಗೆ ನನ್ನ ವಿರೋಧವಿಲ್ಲ ಎಂದು ಹೇಳಿದರು

Leave a Reply

Your email address will not be published. Required fields are marked *

Join WhatsApp Group
error: Content is protected !!