ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಆದಿತ್ಯವಾದರದಂದು ಮೃತಪಟ್ಟಿದ್ದಾನೆ.

ಮೃತಪಟ್ಟ ಯುವಕನನ್ನು ಸಿದ್ಧಕಟ್ಟೆ ನಿವಾಸಿ ಸಂದೀಪ್ ಸಿದ್ದಕಟ್ಟೆ (25) ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ 169ರ ಮೂಡಬಿದ್ರೆಯ ಬೆಳುವಾಯಿ ಪೇಟೆಯಲ್ಲಿ ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ್ದ ಅಪಘಾತದಲ್ಲಿ ಮಂಗಳೂರಿನ ಹೊಟೇಲೊಂದರ ಕಾರ್ಮಿಕ ವೇಣೂರು ಪೆರ್ಮುಡೆ ನಿವಾಸಿ ಸುಮಿತ್ ಮೃತಪಟ್ಟವರು. ಜತೆಗಿದ್ದ ಸಂದೀಪ್ ಸಹಿತ ನಾಲ್ವರು ಗಾಯಗೊಂಡಿದ್ದರು.

ಮೃತಪಟ್ಟ ಸಂದೀಪ್ ಸಿದ್ಧಕಟ್ಟೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!