
ಪುತ್ತೂರು: ತಾಲೂಕಿನಾದ್ಯಂತ ನಿರಂತರ ಮಳೆಯಿಂದಾಗಿ ಪುತ್ತೂರು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಆ.28, 2025 ರಂದು ರಜೆ ಘೋಷಿಸಲಾಗಿದೆ ಎಂದು ತಾಲೂಕು ತಹಶೀಲ್ದಾರರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಮಳೆ ಹಿನ್ನಲೆಯಲ್ಲಿ ತಗ್ಗು ಪ್ರದೇಶಗಳು, ನದಿ, ಕಾಲುವೆ, ಕೆರೆಗಳ ಬಳಿಗೆ ಮಕ್ಕಳನ್ನು ಕರೆದೊಯ್ಯಬಾರದೆಂದು ಪೋಷಕರಿಗೆ ಸೂಚಿಸಲಾಗಿದೆ. ಸಾರ್ವಜನಿಕರು ನದಿತೀರ ಮತ್ತು ತೋಡುಗಳ ಹತ್ತಿರ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಸನ್ನದ್ಧರಾಗಿರಬೇಕು ಎಂದು ಸೂಚಿಸಲಾಗಿದ್ದು, incident commander ಗಳು ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸಬೇಕೆಂದು ತಿಳಿಸಲಾಗಿದೆ.
ಮಳೆಯಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಗೆ ತಾಲೂಕು ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಲು 08251-230349 ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಲಾಗಿದೆ
ವಿದ್ಯಾಮಾನ Whats App Group ಗೆ ಸೇರಲು ಕ್ಲಿಕ್ ಮಾಡಿ
https://chat.whatsapp.com/BObvIUHkDqbDF4kjH9EjTw?mode=ems_copy_c…+91 80739 28324
FOR MORE UPDATES
SUBSCRIBE:
https://youtube.com /@vidyamaananews?si= 1yeLanMgBhca8xlM.







