
ಕಾಸರಗೋಡು: ಅಂಬಲತ್ತರದಲ್ಲಿ ಒಂದೇ ಕುಟುಂಬದ ಮೂವರು ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ.
ಅಂಬಲತ್ತರ ಪಾರಕ್ಲಾಯಿಯ ಗೋಪಿ (60), ಪತ್ನಿ ಇಂದಿರಾ (57) ಹಾಗೂ ಪುತ್ರ ರಂಜಿಸ್ (22) ಮೃತಪಟ್ಟವರಾಗಿ ಗುರುತಿಸಲ್ಪಟ್ಟಿದ್ದಾರೆ. ಇನ್ನೋರ್ವ ಪುತ್ರ ರಾಕೇಶ್ ಗಂಭೀರ ಸ್ಥಿತಿಯಲ್ಲಿ ಇದ್ದು, ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳೀಯರು ನಾಲ್ವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ಮೂವರು ಪ್ರಾಣ ಕಳೆದುಕೊಂಡಿರುವುದು ವೈದ್ಯರು ದೃಢಪಡಿಸಿದ್ದಾರೆ.
ಆರ್ಥಿಕ ಮುಗ್ಗಟ್ಟೇ ಈ ದುರ್ಘಟನೆಯ ಪ್ರಮುಖ ಕಾರಣ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿರುತ್ತಾರೆ.






