ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ‌ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು, ತಾಯಿಯ ಮೆರವಣಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ.

ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಕೆಲವರು ಈ ಬಗ್ಗೆ ಬಹಳ ಉದ್ಧಟತನ‌ದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ಬೇಡ, ಬೇಕಾಗಿಯೂ ಇಲ್ಲ. ಬಾನು ಮುಷ್ತಾಕ್ ಅವರಿಂದ ಪೂಜೆ‌ ಮಾಡಿಸುವುದು ಬೇರೆ. ಆದರೆ ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಸರಿಯಲ್ಲ. ಇದು ಕಾಂಗ್ರೆಸ್ ಸರಕಾರಕ್ಕೆ ಆಪತ್ತು ತರಲಿದೆ ಎಂಬುದನ್ನು ಮರೆಯಬಾರದು ಎಂದರು

Leave a Reply

Your email address will not be published. Required fields are marked *

Join WhatsApp Group
error: Content is protected !!