ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 30ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿದೆ.

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಬಂದಿರುವ ಮುನ್ಸೂಚನೆಯಂತೆ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸೂಚನೆಗಳು:

  • ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು.
  • ಮೀನುಗಾರರು ಸಮುದ್ರಕ್ಕೆ ಇಳಿಯಬಾರದು.
  • ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಹಾಜರಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳಲ್ಲಿ ಸಕ್ರಿಯರಾಗಿರಬೇಕು.
  • ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ಹಾಗೂ ಸಮುದ್ರ ತೀರಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.
  • ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಲಾಗಿದೆ.

ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಂಖ್ಯೆ 1077 ಅಥವಾ 0824-2442590 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!