ಮಂಗಳೂರು:ಅರ್ಯಾಪು ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024–25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ವಿಶೇಷ ಪ್ರಶಸ್ತಿಯನ್ನು ಇಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.

ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹಾಗೂ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶ್ರೀಮತಿ ಜಯಂತಿ ಭಾಸ್ಕರ್ ಅವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರು ಹಾಗೂ “ಸಹಕಾರಿ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಶಾಲು, ಹೂಹಾರ ಹಾಕಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಸಹಕಾರ ಇಲಾಖೆಯ ನಿಬಂಧಕರಾದ ರಮೇಶ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ. ಜಯರಾಮ ರೈ, ಕುಶಾಲಪ್ಪ ಗೌಡ ಬೆಳ್ತಂಗಡಿ, ಮನ್ಮಥ ಸುಳ್ಯ, ಸದಾಶಿವ ಉಲ್ಲಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!