ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರವರೆಗೂ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ. ಈ ಬಾರಿ ಮುಂಗಾರು ಆರಂಭವಾದಾಗಿನಿಂದ ಕರ್ನಾಟಕದಾದ್ಯಂತ ಮಳೆ ಚೆನ್ನಾಗಿ ಬಂದಿದೆ. ಮಧ್ಯೆ ಮಧ್ಯೆ ಒಂದೆರಡು ದಿನ ಬಿಡುವು ಕೊಟ್ಟರೂ ಉತ್ತಮ ಮಳೆಯಾಗಿದೆ.

ಎಲ್ಲೆಲ್ಲಿ ಮಳೆಯಾಗಿದೆ?
ಮಂಕಿ, ಮುಲ್ಕಿ, ಶಕ್ತಿನಗರ, ಮಂಗಳೂರು, ಸುಳ್ಯ, ಉಡುಪಿ, ಸಿದ್ದಾಪುರ, ಮಾಣಿ, ಕೊಟ್ಟಿಗೆಹಾರ, ಭಾಗಮಂಡಲ, ಹೊನ್ನಾವರ, ಆಗುಂಬೆ, ಉಪ್ಪಿನಂಗಡಿ, ಮಂಗಳೂರು, ಕುಂದಾಪುರ, ಕಾರ್ಕಳ, ಗೇರುಸೊಪ್ಪ, ಬೆಳ್ತಂಗಡಿ, ಔರಾದ್, ಪುತ್ತೂರು, ನಾಪೋಕ್ಲು, ಮೂಡುಬಿದಿರೆ, ಕಳಸ, ಪೊನ್ನಂಪೇಟೆ, ಕುಮಟಾ, ಕೋಟಾ, ಗೋಕರ್ಣ, ಧರ್ಮಸ್ಥಳದಲ್ಲಿ ಮಳೆಯಾಗಿದೆ.

ಶೃಂಗೇರಿ, ಸೈದಾಪುರ, ಕಿಬ್ಬನಹಳ್ಳಿ, ಕಮ್ಮರಡಿ, ಜಯಪುರ, ಕ್ಯಾಸಲ್ರಾಕ್, ಬಾಳೆಹೊನ್ನೂರು, ಕೊಪ್ಪ, ಹುಂಚದಕಟ್ಟೆ, ಭಾಲ್ಕಿ, ಅಂಕೋಲಾ, ಅಫ್ಜಲ್ಪುರ, ಮಂಠಾಳ, ಕದ್ರಾ, ಮಿಡಿಗೇಶಿ, ಕದ್ರಾ, ಹಾರಂಗಿ, ಗಂಗಾಪುರ, ಭರಮಸಾಗರ, ಬನವಾಸಿ, ಥೋಂಡೇಬಾವಿ, ನಲ್ವತವಾಡ, ಎನ್ಆರ್ಪುರ,ಕಾರವಾರ, ಹೊಸಪೇಟೆ, ಹೊನ್ನಾಳಿ, ಗುಳೇಗೋಡು, ಭದ್ರಾವತಿ, ಚಿತ್ರದುರ್ಗ, ಯಡ್ರಾಮಿ, ತರೀಕೆರೆ, ಸಂಡೂರು, ಮುದಗಲ್ನಲ್ಲಿ ಮಳೆಯಾಗಿದೆ.

ಮಾಗಡಿ. ಕೂಡಲಸಂಗಮ, ಕೊಟ್ಟೂರು, ಹುಣಸೂರು, ಹುನಗುಂದ, ಇಳಕಲ್, ಹೊಳಲ್ಕೆರೆ, ಹಗರಿಬೊಮ್ಮನಹಳ್ಳಿ, ಎಚ್ಡಿ ಕೋಟೆ, ಗದಗ, ಗೋಪಾಲ್ನಗರ, ಚಿಂತಾಮಣಿ, ಬಾದಾಮಿ, ಅಣ್ಣಿಗೆರೆ, ಆಳಂದದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ, ಎಚ್ಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 26.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್ಪೋರ್ಟ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 23.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!