
ಪುತ್ತೂರು:ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಪುತ್ತೂರಿನ ಸುಭದ್ರಾ ಕಲಾ ಮಂದಿರ, ಮುಕ್ರಂಪಾಡಿಯಲ್ಲಿ ಜರುಗಿತು.
ಸಭೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷರಾಗಿ ಖ್ಯಾತ ವಕೀಲ ಶ್ರೀ ನರಸಿಂಹ ಪ್ರಸಾದ್, ಕಾರ್ಯಾಧ್ಯಕ್ಷರಾಗಿ ಉದ್ಯಮಿ ಶ್ರೀ ಪ್ರಾಣೇಶ್ ಕೆಮ್ಮಾಯಿ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕೋಶಾಧಿಕಾರಿಯಾಗಿ ಶ್ರೀ ಉದಯ್ ಕುಮಾರ್ ರೈ ಸಂಪ್ಯ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು.
ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಭವ್ಯವಾಗಿ ನಡೆಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.






