
ಪುತ್ತೂರು, ಸೆ.2:ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಹಾಗೂ ತಾಲೂಕು ಈದ್ ಮೀಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ)ರ 1500ನೇ ಜನ್ಮ ದಿನಾಚರಣೆಯ ಅಂಗವಾಗಿ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್ ಕಾರ್ಯಕ್ರಮ ಸೆಪ್ಟೆಂಬರ್ 5ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಹಾಜಿ ಕಲ್ಲೇಗ ತಿಳಿಸಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ನಗರದ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಿಲ್ಲೆ ಮೈದಾನದ ತನಕ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಜಾಥಾದಲ್ಲಿ ದಫ್ ಹಾಗೂ ಇಸ್ಲಾಮಿಕ್ ಕಲಾ–ಸಾಹಿತ್ಯ ಪ್ರದರ್ಶನಗಳು ನಡೆಯಲಿದ್ದು, ಉದ್ಯಮಿ ಖಲಂದರ್ ಈಸ್ಟರ್ನ್ ಚಾಲನೆ ನೀಡಲಿದ್ದಾರೆ. ಜುನೈದ್ ಬಿಜಿ ಧ್ವಜ ಸ್ವೀಕರಿಸಲಿದ್ದು, ಆಸಿಫ್ ಪರ್ಲಡ್ಕ ಮತ್ತು ಹಾಜಿ ರಫೀಕ್ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸಮಾವೇಶದಲ್ಲಿ ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ದುವಾ ಆಶೀರ್ವಾಚನ ಗೈಯಲಿದ್ದಾರೆ.ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ. ಅಧ್ಯಕ್ಷತೆ ವಹಿಸಲಿದ್ದು, ಎಂ.ಕೆ.ಸಿನಾನ್ ಸಖಾಫಿ ಅಜಿಲಮೊಗರು ಉದ್ಘಾಟಿಸಲಿದ್ದಾರೆ. ಸೈಯದ್ ಅಲಿ ಮನ್ನಾನಿ ಮುಖ್ಯ ಭಾಷಣ ಮಾಡುವರು. ಇದೇ ಸಂದರ್ಭದಲ್ಲಿ ಹಾಜಿ ಪಿ.ಎ. ಉಸ್ಥಾನ್ ಚೆನ್ನಾರ್ ಸಂಪ್ಯ, ಹಾಜಿ ಎಲ್.ಟಿ. ಅಬ್ದುಲ್ ರಝಾಕ್ ಹಾಗೂ ಹಾಜಿ ಇಬ್ರಾಹೀಂ ಸಾಗರ್ ಅವರನ್ನು ಸನ್ಮಾನಿಸಲಾಗುವುದು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಎಂ.ಪಿ. ಅಬೂಬಕರ್, ಪ್ರಧಾನ ಕಾರ್ಯದರ್ಶಿ ನೌಶಾದ್ ಹಾಜಿ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಡ, ಈದ್ ಮಿಲಾದ್ ಸಮಿತಿಯ ಅಧ್ಯಕ್ಷ ಅಶ್ರಫ್ ಬಾವು ಹಾಗೂ ಕೋಶಾಧಿಕಾರಿ ಹನೀಫ್ ಬಗ್ಗುಮೂಲೆ ಉಪಸ್ಥಿತರಿದ್ದರು.






