
ವಿಟ್ಲ:ಸೆ.03ರಂದು ಸಂಜೆ ಮನೆಯ ಸಮೀಪ ತಲುಪುತ್ತಿದ್ದ ವೇಳೆ ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಮಹಿಳೆ ತನ್ನ ಮಗನನ್ನು ಶಾಲೆಯಿಂದ ಕರೆದುಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುತ್ತಿದ್ದಾಗ, ಆರೋಪಿ ಅಶ್ರಫ್ (33) ಎಂಬಾತನು ಕತ್ತಿ ಹಿಡಿದು ಬಂದು ಅನುಚಿತವಾಗಿ ವರ್ತಿಸಿ, ಕತ್ತಿಯಿಂದ ಹಲ್ಲೆಗೆ ಯತ್ನಿಸಿದ ಎನ್ನಲಾಗಿದೆ. ಈ ವೇಳೆ ಮಹಿಳೆಯ ಬೆರಳುಗಳಿಗೆ ತೀವ್ರ ಗಾಯಗಳಾಗಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಮಹಿಳೆಯ ಬೊಬ್ಬೆ ಕೇಳಿ ತಾಯಿ ಹಾಗೂ ನೆರೆಹೊರೆಯವರು ಓಡಿಬಂದಾಗ, ಆರೋಪಿ ಜೀವ ಬೆದರಿಕೆ ಹಾಕಿ ಸ್ಥಳದಿಂದ ಪರಾರಿಯಾದನು.
ಸಂತ್ರಸ್ತೆಯ ದೂರಿನ ಮೇರೆಗೆ ವಿಟ್ಲ ಠಾಣೆಯಲ್ಲಿ ಅ.ಕ್ರ: 113/2025, ಕಲಂ 74, 109, 118(1), 351(2) ಬಿ.ಎನ್.ಎಸ್. 2023ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಾನ್ಯ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.






