
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ವಿವಾಹಕ್ಕೆ ನಿರಾಕರಿಸಿದ ಆರೋಪದ ಮೇಲೆ ಬಂಧನಕ್ಕೊಳಗಾದ ಬಪ್ಪಳಿಗೆ ನಿವಾಸಿ ಕೃಷ್ಣ ಜೆ. ರಾವ್ (21) ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ಆರೋಪಿಯ ಪರವಾಗಿ ಖ್ಯಾತ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದಿಸಿದ್ದರು. ಆರೋಪಿ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಹಾಗೂ ನಂಬಿಕೆ ದ್ರೋಹ ಪ್ರಕರಣ ದಾಖಲಾಗಿತ್ತು.
ಸಂತ್ರಸ್ತೆ (21) ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾಳೆ. ಜುಲೈ 5 ರಂದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.






