ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣ ಹಾಗೂ ಅದರ ಅಂಗಾಂಗಗಳು ಆಗಸ್ಟ್ 15ರಂದು ಪತ್ತೆಯಾದ ಪ್ರಕರಣದ ತನಿಖೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಸೆ.05ರಂದು ದಸ್ತಗಿರಿ ಮಾಡಿದ್ದಾರೆ.

ಬಂಧಿತರು:

1. ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್ (34)

2. ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48)

3. ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18)

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ: 303(2) BNS, ಕಲಂ: 4,12 ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಆರೋಪಿಗಳ ವಿಚಾರಣೆಯ ವೇಳೆ, ಅವರು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಮತ್ತೊಂದು ಜಾನುವಾರು ಹತ್ಯೆ ಪ್ರಕರಣ (ಅಕ್ರ:76/2025)ದಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣ BNS 2023ರ ಕಲಂ 331(4), 305 ಹಾಗೂ ಕರ್ನಾಟಕ ಜಾನುವಾರು ಹತ್ಯೆ ತಡೆ ಕಾಯ್ದೆ 2020ರ ಕಲಂ 4,5ರಡಿ ದಾಖಲಾಗಿದೆ.

ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಳ ಇನ್ನಷ್ಟು ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆಯಲು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!