
ಮಂಗಳೂರು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಅ.ಕ್ರ: 178/2016 ಕಲಂ 399, 402 ಐ.ಪಿ.ಸಿ ಹಾಗೂ ಮಾನ್ಯ ನ್ಯಾಯಾಲಯದ ಎಸ್.ಸಿ. ನಂ. 14/2024 ಪ್ರಕರಣದ ಆರೋಪಿ ವಿಶಾಲ್ ಕುಮಾರ್ (26), ತಂದೆ: ಜಗದೀಶ್ ಸುವರ್ಣ, ವಾಸ: ಲತಾ ನಿಲಯ, ದೇವೀ ನಗರ, ಕೆ.ಹೆಚ್.ಬಿ ಕಾಲೋನಿ, ಕಾವೂರು ಎಂಬುವವರು ಸುಮಾರು ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು.
ಆರೋಪಿ ದುಬೈನಲ್ಲಿ ತಂಗಿದ್ದ ಖಚಿತ ಮಾಹಿತಿ ಮೇರೆಗೆ ಎಲ್.ಓ.ಸಿ (Look Out Circular) ಹೊರಡಿಸಲಾಗಿತ್ತು. ದಿನಾಂಕ 04-09-2025 ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ಇಮಿಗ್ರೇಷನ್ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಕಾವೂರು ಪೊಲೀಸರಿಗೆ ಒಪ್ಪಿಸಿದರು.
ಪೊಲೀಸರು ಆರೋಪಿಯನ್ನು ಇಂದು ಮಾನ್ಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಯನ್ನು 18-09-2025 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಇದೇ ವೇಳೆ, ನ್ಯಾಯಾಲಯಕ್ಕೆ ನಿರಂತರವಾಗಿ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಅ.ಕ್ರ: 133/2025 ಕಲಂ: 269 ಬಿ.ಎನ್.ಎಸ್ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ವಿಶಾಲ್ ಕುಮಾರ್ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿಯೂ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.






