
ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಮೊರಾರ್ಜಿ ದೇಸಾಯಿ ವಸತಿ ಯುಕ್ತ ಶಾಲೆ ಬಲ್ನಾಡ್ ಪುತ್ತೂರು ಇವರ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ವರ್ಷದೊಳಗಿನ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ, ಪಾಂಗ್ಲಾಯ್ ಪ್ರಥಮ ಸ್ಥಾನ ಗಳಿಸಿದೆ.
ಈ ಸಂದರ್ಭದಲ್ಲಿ ಕು. ಸನ್ನಿದಿ ‘ಬೆಸ್ಟ್ ಕ್ಯಾಚರ್’ ಪ್ರಶಸ್ತಿಯನ್ನು ಮತ್ತು ಕು. ಜುಏನಾ ಡ್ಯಾಝಲ್ ಕುಟಿನ್ಹಾ ‘ಸವ್ಯಸಾಚಿ ಆಟಗಾರ್ತಿ’ ಪ್ರಶಸ್ತಿಯನ್ನು ಪಡೆದುಕೊಂಡರು.
ಶಾಲೆಯ ಪ್ರಾಂಶುಪಾಲರಾದ ಭಗಿನಿ ಅನಿತಾ ಟ್ರೆಸ್ಸಿ ಅವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ, ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿದರು.






