ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇವರ ಸಾರಥ್ಯದಲ್ಲಿ ಆಯೋಜಿಸಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗೂ ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಸೆ.07, ಭಾನುವಾರ, ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ ರವರ ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಘನಾಧ್ಯಕ್ಷತೆಯನ್ನು ಖ್ಯಾತ ವಕೀಲ ಹಾಗೂ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ನರಸಿಂಹ ಪ್ರಸಾದ್ ವಹಿಸಿಕೊಂಡರು.

ವೇದಿಕೆಯಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಂಚಾಲಕರಾದ ಅರುಣ್ ಕುಮಾರ್ ಪುತ್ತಿಲ, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ತಿಂಗಳಾಡಿ, ಕಾರ್ಯದ್ಯಕ್ಷ ಪ್ರಾಣೇಶ್ ಕೆಮ್ಮಾಯಿ, ಕೋಶಾಧಿಕಾರಿ ಉದಯಕುಮಾರ್ ರೈ, ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್ ಟಿ. ಉಪಸ್ಥಿತರಿದ್ದರು.

ಪ್ರಾಸ್ತಾವಿಕ ಭಾಷಣ ಮಾಡಿದ ಅರುಣ್ ಕುಮಾರ್ ಪುತ್ತಿಲ ಅವರು ಸಮಿತಿಯ ವಿವಿಧ ಪದಾಧಿಕಾರಿಗಳ ಹಾಗೂ ಸಂಚಾಲಕರ ಹೆಸರಗಳನ್ನು ಘೋಷಿಸಿದರು. ನಂತರ ನರಸಿಂಹ ಪ್ರಸಾದ್ ಅಧ್ಯಕ್ಷೀಯ ಭಾಷಣ ಮಾಡಿದರು.

ಧನ್ಯವಾದ ಸಮರ್ಪಣೆ ಪ್ರವೀಣ್ ಶೆಟ್ಟಿ ತಿಂಗಳಾಡಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು, ಪಕ್ಷದ ಹಾಗೂ ಸಂಘ ಪರಿವಾರದ ಪದಾಧಿಕಾರಿಗಳು, ಮಾತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!