ಬಂಟ್ವಾಳ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಇಸಾಕ್‌ ಎಂಬವರ ಅಧ್ಯಕ್ಷತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಅಕ್ರಮವಾಗಿ ಧ್ವನಿವರ್ಧಕ ಅಳವಡಿಸಿ, ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಶಬ್ದದಲ್ಲಿ ದಿನಕ್ಕೆ ಐದು ಬಾರಿಯಂತೆ ಅಜಾನ್ ಕೂಗುತ್ತಿರುವುದರಿಂದ ಸ್ಥಳೀಯರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 133/2025, ಕಲಂ 37, 92(ಐ), 109 ಕೆಪಿ ಆಕ್ಟ್ ಹಾಗೂ 292 ಬಿಎನ್‌ಎಸ್ ಅಡಿ ಪ್ರಕರಣ ದಾಖಲಿಸಲಾಗಿದೆ.

ಹಿಂದಿನ ಬೆಳವಣಿಗೆಗಳು:

31/07/2025 ರಂದು ಅಕ್ರಮ ಕಟ್ಟಡ ನಿರ್ಮಾಣ ಹಾಗೂ ಧ್ವನಿವರ್ಧಕ ದುರುಪಯೋಗಕ್ಕೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು.

ಇದೇ ದಿನ ಧ್ವನಿವರ್ಧಕ ಪರವಾನಗಿ ರದ್ದುಗೊಳಿಸಲು ಗ್ರಾಮ ಪಂಚಾಯತ್ ಪೊಲೀಸರುಗೂ ಪತ್ರ ಬರೆದಿತ್ತು.

13/08/2025 ರಂದು ತಪ್ಪು ಮಾಹಿತಿ ನೀಡಿರುವುದು ಮತ್ತು ಪರವಾನಗಿಯನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಉಪಾಧೀಕ್ಷಕರು ಧ್ವನಿವರ್ಧಕ ಪರವಾನಗಿಯನ್ನು ರದ್ದುಗೊಳಿಸಿದ್ದರು.

06/09/2025 ರಂದು ಅಕ್ರಮ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

07/09/2025 ರಂದು ಈ ಘಟನೆಯ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯನ್ನು ಹರಡಿದ ಹಿನ್ನೆಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.


ಪೊಲೀಸರ ವಿನಂತಿ:
ಸಾರ್ವಜನಿಕರು ಮತ್ತು ಮಾಧ್ಯಮ ಮಿತ್ರರು ಸುಳ್ಳು ಸುದ್ದಿಗಳನ್ನು ಹರಡದೇ, ಅವುಗಳಿಗೆ ಮಾನ್ಯತೆ ನೀಡದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!