
ಬಂಟ್ವಾಳ: ಪೆರ್ನೆ ಗ್ರಾಮದ ಕಡಂಬು ಕಾರ್ಲ ರಾಮಧ್ವಾರದ ಬಳಿ ಗೋ ಮಾತಾ ಸಂರಕ್ಷಣಾ ಚಳುವಳಿ ಪೆರ್ನೆ ಸಂಘಟನೆಯ ವತಿಯಿಂದ ಸೆಪ್ಟೆಂಬರ್ 6ರಂದು ಗೋ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ ನಡೆಯಿತು. ಬೆಳಿಗ್ಗೆ 10:30ರಿಂದ 11:30ರವರೆಗೆ ನಡೆದ ಈ ಪ್ರತಿಭಟನೆಯಲ್ಲಿ ಹಲವಾರು ಮಂದಿ ಭಾಗವಹಿಸಿದ್ದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಗಣರಾಜ್ ಭಟ್ ಕೆದಿಲ ಎಂಬವರು ಸ್ಥಳೀಯವಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಧಾರ್ಮಿಕ ಮತ್ತು ಸಮುದಾಯಗಳ ನಡುವೆ ದ್ವೇಷ, ವೈಮನಸ್ಸು ಹುಟ್ಟಿಸುವ ರೀತಿಯ ಮಾತುಗಳನ್ನು ಆಡಿದ್ದಾರೆ ಎಂಬುದು ಪೊಲೀಸರ ಆರೋಪ.
ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 78/2025, ಕಲಂ 353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.






