ಪುತ್ತಿಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಮಂಡಲ ಪದಾಧಿಕಾರಿಗಳ ತುರ್ತು ಸಭೆಯಲ್ಲಿ ಪಕ್ಷದ ಒಳ ಅಸಮಾಧಾನ ಹೊರಹೊಮ್ಮಿದೆ.

ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನವಾದ ಸಂದರ್ಭದಲ್ಲಿ ಸಂಸದರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು ನೀಡಿದ ಭರವಸೆ ಈಡೇರಿಸದಿರುವುದು ಹಾಗೂ ಸಂಘ–ಪಕ್ಷದ ಕೆಲ ನಾಯಕರ ನಡೆ ಬೂತ್ ಮಟ್ಟದ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಪಕ್ಷದ ಕಾರ್ಯಕರ್ತರ ತ್ಯಾಗವನ್ನು ಅವಮಾನಿಸುವ ರೀತಿಯ ಹೇಳಿಕೆಗಳನ್ನು ನಾಯಕರಿಂದ ನೀಡಲಾಗುತ್ತಿರುವುದನ್ನು ಸಭೆಯಲ್ಲಿ ತೀವ್ರವಾಗಿ ಆಕ್ಷೇಪಿಸಲಾಯಿತು. ತಕ್ಷಣ ಹಿರಿಯರು ಮಧ್ಯಪ್ರವೇಶಿಸಿ ಪರಿಹಾರ ಕಂಡುಕೊಳ್ಳಬೇಕೆಂದು ನಿರ್ಣಯಿಸಲಾಯಿತು.

ಸಭೆಯಲ್ಲಿ ಮುಂದಿನ ದಿನಗಳಲ್ಲಿ ಸಂಘ ಶತಾಬ್ದಿಯ ಅಂಗವಾಗಿ ನವೆಂಬರ್‌ನಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವ ಯಶಸ್ವಿಗೆ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕೆಂದು ನಿರ್ಧರಿಸಲಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!