
ಪ್ರತಿಭಟನೆಯ ಲಾಭ ಪಡೆದುಕೊಂಡ ಕೈದಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದ್ದಾರೆ. ದೇಶದಾದ್ಯಂತ (ನೇಪಾಳ) ವಿವಿಧ ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಗುರುವಾರ ಬೆಳಿಗ್ಗೆ, ಮಾಧೇಶ್ ಪ್ರಾಂತ್ಯದ ರಾಮೆಚಾಪ್ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿದೆ.
ಈ ವೇಳೆ ಭದ್ರತಾ ಪಡೆಗಳು ಗುಂಡು ಹಾರಿಸಿದ್ದು, ಮೂವರು ಕೈದಿಗಳು ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮೆಚಾಪ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಾಥಮಿಕ ಮೂಲಗಳ ಪ್ರಕಾರ, 25ಕ್ಕೂ ಹೆಚ್ಚು ಜೈಲುಗಳಿಂದ 15,000ಕ್ಕೂ ಹೆಚ್ಚು ಕೈದಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ‘ದಿ ಕಠ್ಮಂಡು ಪೋಸ್ಟ್’ ಪತ್ರಿಕೆ ವರದಿ ಮಾಡಿದೆ.
ಇದಕ್ಕೂ ಮುನ್ನ (ಮಂಗಳವಾರ) ಪಶ್ಚಿಮ ನೇಪಾಳದಲ್ಲಿನ ಜೈಲಿನಲ್ಲಿ ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ, ಕಾನೂನು ಸಂಘರ್ಷಕ್ಕೆ ಒಳಗಾದ ಐವರು ಬಾಲಕರು ಮೃತಪಟ್ಟಿದ್ದರು.









