ಮಂಗಳೂರು:ಸಾಮಾಜಿಕ ಜಾಲತಾಣ ಫೇಸ್‌ಬುಕ್ ನಲ್ಲಿ ಭಾವೈಕ್ಯತೆಗೆ ಧಕ್ಕೆ ಉಂಟುಮಾಡುವ ರೀತಿಯ ಬರಹವನ್ನು ಪ್ರಕಟಿಸಿದ್ದ ಪ್ರಕರಣದಲ್ಲಿ ಮೂಡಬಿದರೆ ಪೊಲೀಸರು ಮಹೇಶ್ ವಿಕ್ರಂ ಹೆಗ್ಡೆ (45) ಅವರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಹೇಶ್ ವಿಕ್ರಂ ಹೆಗ್ಡೆ ಅವರು “POST CARD” ಹೆಸರಿನಲ್ಲಿ ತಮ್ಮ ಖಾತೆಯಲ್ಲಿ “ಮಾನ್ಯ ಮುಖ್ಯ ಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ”
ಎಂಬ ಬರಹವನ್ನು 09-09-2025 ರಂದು ಪೋಸ್ಟ್ ಮಾಡಿದ್ದರು.

ಈ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. ಸಂ. 143/2025, ಕಲಂ 353(2) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಿಸಲ್ಪಟ್ಟಿತ್ತು. ತನಿಖೆಯನ್ನು ಮುಂದುವರಿಸಿದ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಸೆಪ್ಟೆಂಬರ್ 12 ರಂದು ಮೂಡಬಿದರೆಯ ಸಿ.ಜೆ ಮತ್ತು ಕೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಮಾನ್ಯ ನ್ಯಾಯಾಲಯವು ಮಹೇಶ್ ವಿಕ್ರಂ ಹೆಗ್ಡೆ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!