ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಟ್ರಕ್ ಹರಿದು ಘೋರ ದುರಂತ ಸಂಭವಿಸಿದೆ.

ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿ ಪರಿಹಾರ ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿ ಸಂಭವಿಸಿದ ದುರಂತ ಹೃದಯ ವಿದ್ರಾವಕವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂಬುದು ನನ್ನ ಆಶಯ. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ನೀಡಲಾಗುವುದು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನು ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ ಎನ್ನುವ ಮಾಹಿತಿ ಇದೆ

Leave a Reply

Your email address will not be published. Required fields are marked *

Join WhatsApp Group
error: Content is protected !!