
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ 2012ರಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆ ಕಂಡುಬಂದಿದೆ.
ಸೌಜನ್ಯಳನ್ನು ಆಕೆಯ ಮಾವ ವಿಠಲ ಗೌಡ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ದ ವೆಂಕಪ್ಪ ಕೋಟ್ಯಾನ್ ಸೆಪ್ಟೆಂಬರ್ 12ರಂದು ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ದೂರು ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ಅವರು ವಿಠಲ ಗೌಡ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವುದು, ಸೌಜನ್ಯ ಕೊಲೆಗಾರರನ್ನು ಪತ್ತೆಹಚ್ಚುವ ಹೋರಾಟವನ್ನು ದಾರಿ ತಪ್ಪಿಸುವ ದುರುದ್ದೇಶದಿಂದ ಮಾಡಲ್ಪಟ್ಟದ್ದಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮೈಸೂರಿನಿಂದ ಕರೆಸಿ ಇಂತಹ ಹೇಳಿಕೆ ನೀಡಿಸಿರುವುದರ ಹಿಂದೆ ಯಾರಾದರೂ ಪ್ರೇರೇಪಕರಿದ್ದಾರೆ ಎಂಬ ಅನುಮಾನ ವ್ಯಕ್ತಪಡಿಸಿ, ಆತನನ್ನು ಠಾಣೆಗೆ ಕರೆಸಿ ಕುಲಂಕುಷವಾಗಿ ವಿಚಾರಣೆ ನಡೆಸಬೇಕು ಮತ್ತು ಪ್ರೇರೇಪಿಸಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ದೂರುದಲ್ಲಿ ಒತ್ತಾಯಿಸಲಾಗಿದೆ.









