
ಮಂಗಳೂರು: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ.
ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದು, ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.









