ಸೌದಿ ಅರೇಬಿಯಾದಲ್ಲಿ ಬಸ್‌ಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲದ ಯುವಕ ಅಬ್ದುಲ್ ರಾಝಿಕ್ (27) ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮಿಲ್ಲತ್ ನಗರ ನಿವಾಸಿ ರಾಝಿಕ್, ಸೌದಿ ಅರೇಬಿಯಾದ ಜುಬೈಲ್‌ನ ಪಾಲಿಟೆಕ್ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದರು. ಸೆಪ್ಟೆಂಬರ್ 14ರ ಸಂಜೆ ರಾತ್ರಿ ಪಾಳಿ ಕೆಲಸಕ್ಕೆಂದು ಬಸ್‌ನಲ್ಲಿ ತೆರಳುತ್ತಿದ್ದಾಗ ಮತ್ತೊಂದು ಬಸ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಗಂಭೀರವಾಗಿ ಗಾಯಗೊಂಡ ರಾಝಿಕ್ ಸ್ಥಳದಲ್ಲೇ ಪ್ರಾಣ ಕಳೆದುಕೊಂಡರು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಜುಲೈ 11ರಂದು ಊರಿಗೆ ಬಂದಿದ್ದ ಅವರು, ಒಂದು ತಿಂಗಳ ರಜೆ ಮುಗಿಸಿ ಆಗಸ್ಟ್ 15ರಂದು ವಿದೇಶಕ್ಕೆ ಮರಳಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!