
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸೆ.15ರಂದು ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಪೆಟ್ರೋಲ್ ಕರ್ತವ್ಯದಲ್ಲಿದ್ದ ವೇಳೆ, ಬಾತ್ಮಿದಾರರಿಂದ ಬಂದ ಮಾಹಿತಿಯ ಆಧಾರದ ಮೇಲೆ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಎರುಂಬು ರಸ್ತೆಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಮೂವರನ್ನು ವಿಚಾರಣೆಗೊಳಪಡಿಸಲಾಯಿತು.
ಪೊಲೀಸರ ತನಿಖೆಯಲ್ಲಿ ಬಂಧಿತರು:
1. ಸನತ್ ಕುಮಾರ್ (23) – ವಿಟ್ಲ ಕಸಬಾ, ಮಂಗಳಪದವು ನಿವಾಸಿ
2. ಮಹಮ್ಮದ್ ರಾಝಿಕ್ (23) – ವಿಟ್ಲ ಕಸಬಾ ನಿವಾಸಿ
3. ಚೇತನ್ (23) – ವಿಟ್ಲ ಕಸಬಾ, ಮಂಗಳಪದವು ನಿವಾಸಿ ಎಂದು ಗುರುತಿಸಲಾಗಿದೆ.
ಅವರ ವಶದಿಂದ 6.27 ಗ್ರಾಂ ಗಾಂಜಾ, ಮೂರು ಮೊಬೈಲ್ ಫೋನ್‌ಗಳು, ಒಂದು ಚೂರಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ವಿಟ್ಲ ಠಾಣೆಯಲ್ಲಿ ಅಕ್ರ 126/2025ರಂತೆ NDPS Act ಕಲಂ 8(b), 20(b)(ii)(A) ಜೊತೆಗೆ BNS 2023 ರ 3(5)ರಡಿ ಪ್ರಕರಣ ದಾಖಲಿಸಲಾಗಿದೆ.
ಮುಂದಿನ ತನಿಖೆಯಲ್ಲಿ ಎರ್ಮೆ ಮಜಲು ನಿವಾಸಿ ಧ್ಯಾನ್ ಕರ್ಕೆರ (23) ಎಂಬ ಇನ್ನೊಬ್ಬ ಆರೋಪಿಯನ್ನು ಸಹ ಬಂಧಿಸಲಾಗಿದೆ.









