
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 95/2020ರಲ್ಲಿ ವಶಪಡಿಸಿಕೊಂಡಿದ್ದ KA-19-N-0312 ನೇ ಓಮ್ಮಿ ಕಾರನ್ನು ಮಾನ್ಯ ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿದೆ.
2020ರಲ್ಲಿ Cow Slaughter Act ಹಾಗೂ Prevention of Cruelty to Animals Act ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಮಹಜರು ಸಮಯ ಸ್ವಾಧೀನಕ್ಕೆ ಪಡೆದಿದ್ದ ಈ ಕಾರು ಪ್ರಸ್ತುತ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ನಿಲ್ಲಿಸಲಾಗಿದೆ.
ಈ ಕಾರಿನ ಹರಾಜು 2025ರ ಸೆಪ್ಟೆಂಬರ್ 18ರಂದು ಬೆಳಿಗ್ಗೆ 11:00 ಗಂಟೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ನಡೆಯಲಿದ್ದು, ಸಾರ್ವಜನಿಕರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಠಾಣೆಯಿಂದ ಪ್ರಕಟಿಸಲಾಗಿದೆ.
ಸ್ಥಳ: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ






