ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೊಬ್ಬನು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮಂಗಳೂರಿನ ಸಿ.ಎ. ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಇವರಲ್ಲಿ ಕೇರಳ ಅಡೂರು ನಿವಾಸಿ ಕಾರ್ತಿಕ್ (22) ಹಾಗೂ ಪುತ್ತೂರು ತಾಲೂಕು ಇರ್ದೆ ಗ್ರಾಮದ ಬೆಟ್ಟಂಪಾಡಿ ನಡುವಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಪುತ್ರ ಮನೋಜ್ ಎನ್. (22) ಇದ್ದರು.

ಟ್ರೆಕ್ಕಿಂಗ್ ವೇಳೆ ಮನೋಜ್ ಆಕಸ್ಮಿಕವಾಗಿ ಜಾರಿಬಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ದುರ್ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!