ಉಡುಪಿ: ಬ್ರಹ್ಮಾವರದಲ್ಲಿ ಹಾಸ್ಟೆಲ್‌ನಿಂದ ಕಾಲೇಜಿಗೆ ತೆರಳಿದ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಬ್ರಹ್ಮಾವರ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್‌ನಲ್ಲಿ ಬಿಸಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಸ್ಪೂರ್ತಿ ಎಸ್. ಹಿರೇಮಠ (ವಿದ್ಯಾರ್ಥಿನಿ) ಸೆಪ್ಟೆಂಬರ್ 15ರಂದು ಬೆಳಿಗ್ಗೆ ಹಾಸ್ಟೆಲ್‌ನಿಂದ ಕಾಲೇಜಿಗೆ ಹೊರಟಿದ್ದರು. ಆದರೆ ಕಾಲೇಜಿಗೆ ತಲುಪದೆ ನಾಪತ್ತೆಯಾಗಿರುವುದು ಪತ್ತೆಯಾಗಿದೆ.

ಸ್ಫೂರ್ತಿ ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, ನಿಯಮಿತವಾಗಿ ತರಗತಿಗಳಿಗೆ ಹಾಜರಾಗುತ್ತಿದ್ದಳು. ಆದರೆ ಸೋಮವಾರ ಬೆಳಿಗ್ಗೆ ಕಾಲೇಜಿಗೆ ಬಂದಿರದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ನಾಪತ್ತೆಯಾದ ಪ್ರಕರಣ ಬಹಿರಂಗವಾಯಿತು.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಬ್ರಹ್ಮಾವರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!