ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರ ಬ್ಯಾಂಕ್ ಖಾತೆಗಳನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿ ಸುಮಾರು ₹3 ಲಕ್ಷ ಹಣ ಕದ್ದಿರುವ ಘಟನೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆರ್‌ಎಂವಿ ಎಕ್ಸ್ಟೆನ್ಷನ್‌ನ ಬಿಬಿಎಂಪಿ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ 75 ಪೌರ ಕಾರ್ಮಿಕರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಿ.ವಿ.ಎಸ್. ಮಾಧ್ಯಮಗಳೊಂದಿಗೆ ಮಾತನಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದರು.

“ನಿನ್ನೆ ನನ್ನ ಮೂರು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಲಾಗಿದೆ. ಪ್ರತಿಯೊಂದು ಖಾತೆಯಿಂದಲೂ ಸುಮಾರು ಒಂದು ಲಕ್ಷ ರೂಪಾಯಿ ಹಣ ಕಳೆದು ಹೋಗಿದೆ. ಒಟ್ಟು ₹3 ಲಕ್ಷ ಹಾನಿಯಾಗಿದೆ. ಹೆಚ್‌ಡಿಎಫ್‌ಸಿ, ಎಸ್‌ಬಿಐ ಮತ್ತು ಆಕ್ಸಿಸ್ ಬ್ಯಾಂಕ್ ಖಾತೆಗಳಿಂದ ಹಣ ಎಗರಿಸಲಾಗಿದೆ. ಯುಪಿಐ ಮೂಲಕ ಹ್ಯಾಕ್ ಮಾಡಿರುವುದು ಕಂಡು ಬಂದಿದೆ. ಈ ಕುರಿತು ಸೈಬರ್ ಕ್ರೈಂಗೆ ದೂರು ನೀಡುತ್ತೇನೆ” ಎಂದು ಡಿವಿಎಸ್ ತಿಳಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!