

ಪುತ್ತೂರು: ನರಿಮೊಗರು ಗ್ರಾಮದ ಪುರುಷರಕಟ್ಟೆ ಪ್ರದೇಶದ ಮೊಬೈಲ್ ಟವರ್‌ಗೆ ಅಳವಡಿಸಿದ್ದ ಬ್ಯಾಟರಿಗಳ ಕಳವು ಪ್ರಕರಣವನ್ನು ಪುತ್ತೂರು ನಗರ ಪೊಲೀಸ್‌ರು ಭೇದಿಸಿದ್ದಾರೆ.
ದಿನಾಂಕ 07-09-2025 ರಿಂದ 13-09-2025 ರ ನಡುವಿನ ಅವಧಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ಸೆಪ್ಟೆಂಬರ್ 13 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 79/2025 ಕಲಂ 331(3), 331(4), 305 BNS 2023 ರಂತೆ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೊಂಡ ಪೊಲೀಸರು ಕೇರಳದ ಕೊಲ್ಲಂ ನಿವಾಸಿ ಇಟ್ಟಿ ಫನಿಕ್ಕರ್ (60) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದು, ಆರೋಪಿಯಿಂದ ಕಳವುಗೈದ ಬ್ಯಾಟರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.






