ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ ಗುರುವಾರವೂ ಮುಂದುವರಿಸಿದೆ.

ಎಸ್‌ಐಟಿ ಶೋಧದ ವೇಳೆ ಮತ್ತೆ ಎರಡು ತಲೆ ಬುರುಡೆಗಳು ಪತ್ತೆಯಾಗಿರುವುದಾಗಿ ಎಸ್‌ಐ‌ಟಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ.

ಬುಧವಾರ ಶೋಧ ಕಾರ್ಯ ನಡೆಸಿದ ಸಂದರ್ಭದಲ್ಲಿ ಹಲವೆಡೆ ನೆಲದ ಮೇಲೆಯೇ ಮೃತದೇಹಗಳ ಅವಶೇಷಗಳು ಸಿಕ್ಕಿವೆ. ಬುಧವಾರ ಗುರುತಿಸಿದ ಜಾಗದಲ್ಲಿ ಇಂದು(ಗುರುವಾರ) ಮತ್ತೆ ಪರಿಶೀಲನೆ ನಡೆಸಲಾಗಿದ್ದು, ಅಲ್ಲಿ ಇನ್ನೆರಡು ಬುರುಡೆಗಳನ್ನು ಹಾಗೂ ಅವಶೇಷಗಳನ್ನು ಸಂಗ್ರಹಿಸುವ ಕಾರ್ಯವನ್ನು ಅಧಿಕಾರಿಗಳು ಮಾಡಿದ್ದಾರೆ ಎಂದು ಗೊತ್ತಾಗಿದೆ.

ಬಂಗ್ಲೆ ಗುಡ್ಡದಲ್ಲಿ ಒಟ್ಟು 7 ತಲೆಬುರುಡೆಗಳು ಪತ್ತೆಯಾಗಿದ್ದು, ಅಲ್ಲಿ ಲಭಿಸಿದ ಎಲ್ಲ ವಸ್ತುಗಳನ್ನು ಸಂಗ್ರಹಿಸುವ ಕಾರ್ಯವನ್ನು ಎಸ್‌ಐ‌ಟಿ ತಂಡ ಮಾಡಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!