ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಎಳೆದು ಕಳ್ಳತನ ಮಾಡಿದ ಪ್ರಕರಣದಲ್ಲಿ ಆರೋಪಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿರುವ ಬಗ್ಗೆ ಬೆಳ್ತಂಗಡಿ ನ್ಯಾಯಾಲಯ ತೀರ್ಪು ನೀಡಿದೆ.

ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ 100/2024 ಕಲಂ 126(2), 309(5), 309(6) BNS ಅಡಿ ದಾಖಲಾಗಿದ್ದ ಪ್ರಕರಣದಲ್ಲಿ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಎಳೆದು ಕಳ್ಳತನ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಬಂಧನಕ್ಕೊಳಗಾಗಿ, ಠಾಣೆಯ ಪೊಲೀಸ್ ನಿರೀಕ್ಷಕ ಸುಬ್ಬಾಪುರ್ ಮಠ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸಂದೇಶ್ ರವರು ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಪು ನೀಡಿ, 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 5000 ರೂ. ದಂಡ ವಿಧಿಸಿದರು. ದಂಡ ಪಾವತಿಸಲು ವಿಫಲರಾದರೆ ಹೆಚ್ಚುವರಿ 6 ತಿಂಗಳ ಕಾರಾಗೃಹ ವಾಸ ಅನುಭವಿಸಬೇಕಾಗಿದೆ.

ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸಹಾಯಕ ಅಭಿಯೋಜಕರಾದ ಶ್ರೀಮತಿ ಆಶಿತಾ ವಾದಿಸಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!