
ಬಂಟ್ವಾಳ, ಸೆ.20:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಆಗಸ್ಟ್ 14ರಂದು ನಡೆದ ಜಾನುವಾರು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ–2000 (KCOCA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಗಸ್ಟ್ 15ರಂದು ಜಾನುವಾರು ಅಂಗಾಂಗಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ:125/2025, ಕಲಂ:303(2) BNS, ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಕಾಯ್ದೆ-2020 (ಕಲಂ 4,12) ಹಾಗೂ ಪ್ರಾಣಿ ಹಿಂಸೆ ತಡೆ ಕಾಯ್ದೆ (ಕಲಂ 11(ಡಿ)) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಬಳಿಕ ಆರೋಪಿಗಳಾದ
1. ಇರ್ಷಾದ್ (34), ಉಳ್ಳಾಲ ಚೆಂಬುಗುಡ್ಡೆ
2. ಮಹಮ್ಮದ್ ಮನ್ಸೂರ್ (48), ಮಂಗಳೂರು ಕುದ್ರೋಳಿ
3. ಅಬ್ದುಲ್ ಅಝೀಮ್ (18), ಮಂಗಳೂರು ಕಣ್ಣೂರು
ಇವರನ್ನು ಸೆಪ್ಟೆಂಬರ್ 5ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದೇ ಆರೋಪಿಗಳು ಸೆ.4ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾನುವಾರು ಹತ್ಯೆ ಹಾಗೂ ಕಳವು ಪ್ರಕರಣ (ಅಕ್ರ:76/2025) ದಲ್ಲೂ ಭಾಗಿಯಾಗಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಪೊಲೀಸರು ತಿಳಿಸಿದ್ದಾರೆ: “ಆರೋಪಿಗಳ ವಿರುದ್ಧ KCOCA ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ. ಜಿಲ್ಲೆಯಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.





