ಪುತ್ತೂರು, ಸೆ.20:“ವೈದ್ಯಕೀಯ ಕ್ಷೇತ್ರವು ವಿಪುಲ ಅವಕಾಶಗಳನ್ನು ನೀಡುತ್ತಿದೆ. ಜೀವ ರಕ್ಷಣೆಯ ಶ್ರೇಷ್ಠ ಉದ್ಯೋಗ ಒದಗಿಸುವ ಪ್ಯಾರಾಮೆಡಿಕಲ್ ಶಿಕ್ಷಣವು ಸಮಾಜಕ್ಕೆ ಮಹತ್ತರ ಕೊಡುಗೆ ನೀಡುತ್ತಿದೆ. ಪ್ರಗತಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಡಾ. ಶ್ರೀಪತಿ ರಾವ್ ಅವರು ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ” ಎಂದು ಪುತ್ತೂರು ತಾಲೂಕು ಆಸ್ಪತ್ರೆಯ ಉಪ ವೈದ್ಯಾಧಿಕಾರಿ ಡಾ. ಯದುರಾಜ್ ಡಿ.ಕೆ. ಹೇಳಿದರು.

ಅವರು ಪುತ್ತೂರು ಪುರಭವನದಲ್ಲಿ ನಡೆದ ಪ್ರಗತಿ ಪ್ಯಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಉಪ್ಪಿನಂಗಡಿಯ ಹಿರಿಯ ವೈದ್ಯ ಡಾ. ಕೆ.ಜಿ. ಭಟ್ ಸನ್ಮಾನ ಸ್ವೀಕರಿಸಿ ಮಾತನಾಡಿ, “ವೈದ್ಯರ ಯಶಸ್ಸಿನಲ್ಲಿ ಟೆಕ್ನಿಶಿಯನ್‌ಗಳ ಪಾತ್ರ ಮಹತ್ವದ್ದಾಗಿದೆ. ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳ ಬಾಂಧವ್ಯ ಅನನ್ಯ” ಎಂದರು.

ಸಭಾಧ್ಯಕ್ಷತೆಯನ್ನು ವಹಿಸಿದ ಪ್ರಗತಿ ಆಸ್ಪತ್ರೆ ಮತ್ತು ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಯು. ಶ್ರೀಪತಿ ರಾವ್ ತಮ್ಮ ವೃತ್ತಿ ಬದುಕಿನ ಅನುಭವ ಹಂಚಿಕೊಂಡರು. ಟ್ರಸ್ಟಿ ಡಾ. ಸುಧಾ ಎಸ್. ರಾವ್ ವೈದ್ಯಕೀಯ ವೃತ್ತಿಯ ಜವಾಬ್ದಾರಿಯುತತೆ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಗತಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಶ್ರೀಮತಿ ಪ್ರೀತಾ ಹೆಗ್ಡೆ, ಪ್ರಗತಿ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಹೇಮಲತಾ, ಪ್ಯಾರಾಮೆಡಿಕಲ್ ಕಾಲೇಜಿನ ಪ್ರಾಚಾರ್ಯೆ ಶ್ರೀಮತಿ ಮಾನಸ, ಉಪ ಪ್ರಾಚಾರ್ಯೆ ಶ್ರೀಮತಿ ಚೈತ್ರ, ವಿದ್ಯಾರ್ಥಿ ನಾಯಕ ಮುಹಮ್ಮದ್ ಸೈಫ್ ಉಪಸ್ಥಿತರಿದ್ದರು.

ಪ್ರಾಚಾರ್ಯೆ ಶ್ರೀಮತಿ ಮಾನಸ ವಾರ್ಷಿಕ ವರದಿ ಮಂಡಿಸಿದರು. ಆಡಳಿತಾಧಿಕಾರಿ ಶ್ರೀಮತಿ ಪ್ರೀತಾ ಹೆಗ್ಡೆ ಸ್ವಾಗತಿಸಿ, ಉಪ ಪ್ರಾಚಾರ್ಯೆ ಶ್ರೀಮತಿ ಚೈತ್ರ ಧನ್ಯವಾದ ಸಲ್ಲಿಸಿದರು. ಉಪನ್ಯಾಸಕರಾದ ಶಶಿಕುಮಾರ್ ಮತ್ತು ದೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಸಭೆಯ ನಂತರ ವಿದ್ಯಾರ್ಥಿಗಳಿಂದ ವಿವಿಧ ಮನರಂಜನಾ ಕಾರ್ಯಕ್ರಮಗಳು ಜರುಗಿತ್ತು.

Leave a Reply

Your email address will not be published. Required fields are marked *

Join WhatsApp Group
error: Content is protected !!