ಉಡುಪಿ ನಗರದ ಚಿತ್ತರಂಜನ್ ಸರ್ಕಲ್‌ನ ಮಾರುತಿ ವೀಥಿಕಾ ಬಳಿ ಜುವ್ಯೆಲ್ಲರಿ ವರ್ಕ್‌ಶಾಪ್‌ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರ ರಾಜ್ಯದ ಸೋಲಾಪುರ ಜಿಲ್ಲೆಯ ಮಲ್ಶಿರೋಸ್ ತಾಲೂಕಿನ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ(23), ನಿಲೇಶ ಬಾಪು ಕಸ್ತೂರಿ(19), ಸಾಗರ ದತ್ತಾತ್ರೇಯ ಕಂಡಗಾಲೆ(32), ಬಾಗವ ರೋಹಿತ್ ಶ್ರೀಮಂತ್(25) ಬಂಧಿತ ಆರೋಪಿಗಳು.

ಬಂಧಿತರಿಂದ 74,88,000ರೂ. ಮೌಲ್ಯದ 748.8 ಗ್ರಾಂ ಚಿನ್ನ, 3,60,000 ರೂ. ಮೌಲ್ಯದ 4 ಕೆಜಿ 445 ಗ್ರಾಂ ಬೆಳ್ಳಿ, 5,00,000ರೂ. ನಗದು, ಕೃತ್ಯಕ್ಕೆ ಬಳಸಿದ ಕಾರು ಸೇರಿದಂತೆ ಒಟ್ಟು 87,48,000ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಕುಮಟೆ ಮೂಲದ, ಪ್ರಸ್ತುತ ನಗರದ ಅಪಾರ್ಟ್‌ಮೆಂಟ್ ನಿವಾಸಿ ವೈಭವ್ ಮೋಹನ ಘಾಟಗೆ ಎಂಬವರಿಗೆ ಸೇರಿದ ಮಾರುತಿ ವೀಥಿಕಾ ಬಳಿಯ ಉಪೇಂದ್ರ ಎಂಬ ಕಟ್ಟಡದ ನೆಲಮಹಡಿಯಲ್ಲಿರುವ ವೈಭವ ಗೋಲ್ಡ್ ಆಯಂಡ್ ಸಿಲ್ವರ್ ಮೆಲ್ಟಿಂಗ್ ಮತ್ತು ರಿಫೈನರಿ ಅಂಗಡಿಗೆ ಸೆ.8ರಂದು ರಾತ್ರಿ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು, ರಿಫೈನರಿ ಮಷಿನ್‌ನಲ್ಲಿಟ್ಟಿದ್ದ 95,71,000ರೂ. ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Leave a Reply

Your email address will not be published. Required fields are marked *

Join WhatsApp Group
error: Content is protected !!